ಹೊಸ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ: ಕುತೂಹಲಕ್ಕೆ ಕಾರಣವಾಯ್ತು ಸಚಿವರ ನಡೆ

Updated on: Sep 20, 2025 | 12:26 PM

ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ  ಸಚಿವರಾದ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿರುವುದು ರಾಜ್ಯದಲ್ಲಿ ಚರ್ಚೆಗೆ ಒಳಗಾಗಿದೆ. ಮುಂಬರುವ 2028ರ ಚುನಾವಣೆಗಾಗಿ ಈ ಹೆಲಿಕಾಪ್ಟರ್​ ಖರೀದಿಸಿದ್ದಾರೆ ಎಂದು ರಾಜ್ಯಾದ್ಯಂತ ಚರ್ಚೆಗಳು ಹುಟ್ಟಿಕೊಂಡಿವೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್​ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್​ ಪರಿಶೀಲನೆಗೆ ಒಳಪಡಿಸಿದ ದೃಶ್ಯಗಳು ಇಲ್ಲಿವೆ ನೋಡಿ

ಬೆಳಗಾವಿ, ಸೆಪ್ಟೆಂಬರ್ 20: ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ  ಸಚಿವ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್​ನಲ್ಲಿ ತಮ್ಮ ಹೊಸ ಹೆಲಿಕಾಪ್ಟರ್​ ಪರಿಶೀಲಿಸಿದರು. ಈಗಾಗಲೇ ಅವರ ಬಳಿ ಇದ್ದ ಹೆಲಿಕಾಪ್ಟರ್​​ನ್ನು ಮಾರಾಟ ಮಾಡಿ ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆಗೆ ಹೆಲಿಕಾಪ್ಟರ್ ಪರ್ಚೇಸ್ ಮಾಡಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Sep 20, 2025 11:30 AM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More