ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಸದ್ಯ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ವಿಧಾನಪರಿಷತ್ ಗೆ ಸದಸ್ಯರ ನಾಮಕರಣ ಹಾಗೂ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುವ ಬಗ್ಗೆ ಮಾತುಕತೆ ನಡೆದಿವೆ. ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯನವರು ಮೊನ್ನೇ ದೆಹಲಿಗೆ ಹೋಗಿದ್ದ ವೇಳೆ ರಾಹುಲ್ ಗಾಂಧಿ ಚರ್ಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದರ ನಡುವೆ ಸಿಎಂ ಬದಲಾವಣೆ ಮಾತುಗಳು ಸಹ ಕೇಳಿಬರುತ್ತಿವೆ. ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ವಿಜಯನಗರ, (ಜೂನ್ 17): ಸದ್ಯ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ವಿಧಾನಪರಿಷತ್ ಗೆ ಸದಸ್ಯರ ನಾಮಕರಣ ಹಾಗೂ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುವ ಬಗ್ಗೆ ಮಾತುಕತೆ ನಡೆದಿವೆ. ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯನವರು ಮೊನ್ನೇ ದೆಹಲಿಗೆ ಹೋಗಿದ್ದ ವೇಳೆ ರಾಹುಲ್ ಗಾಂಧಿ ಚರ್ಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದರ ನಡುವೆ ಸಿಎಂ ಬದಲಾವಣೆ ಮಾತುಗಳು ಸಹ ಕೇಳಿಬರುತ್ತಿವೆ. ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಸಿಎಂ ಬದಲಾವಣೆ ಆಗ್ತಾರೆ ಅಂದ್ರೆ ನಾವೇನು ಹೇಳೋದು. ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅದು ಚರ್ಚೆಗೆ ಬಂದಾಗ ನೋಡೋಣ . ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ

Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
