ಮಹದೇವಪ್ಪ ಮನೆಯಲ್ಲಿ ಎಸ್ಸಿ ಎಸ್ಟಿ ನಾಯಕರ ಸಭೆ: ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಾದ ಹಣವನ್ನು ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಸಂದರ್ಭದಲ್ಲೇ ಕಾಂಗ್ರೆಸ್ನ ದಲಿತ ನಾಯಕರು ಸಚಿವ ಹೆಚ್ಸಿ ಮಹದೇವಪ್ಪ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಆ ಸಭೆಯ ರಹಸ್ಯವೇನೆಂಬುದನ್ನು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗಪಡಿಸಿದ್ದಾರೆ.
ಬೆಂಗಳೂರು, ಮಾರ್ಚ್ 18: ಗೃಹ ಸಚಿವ ಡಾ. ಜಿ ಪರಮೇಶ್ವರ್ ನೇತೃತ್ವದಲ್ಲಿ ನಮ್ಮ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ಸಿ ಮಹದೇವಪ್ಪ ನಿವಾಸದಲ್ಲಿ ಸಭೆ ಸೇರಲಾಗಿತ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಆ ಸಭೆಯಲ್ಲಿ ಏನೇನು ಚರ್ಚೆಯಾಯ್ತು ಎಂಬುದನ್ನೂ ಅವರು ತಿಳಿಸಿದ್ದು, ವಿವರಗಳು ವಿಡಿಯೋದಲ್ಲಿವೆ.