ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹಿಂದೆ ಹೇಳಿದ್ದನ್ನೇ ಪುನರಾವರ್ತಿಸಿದರು!
ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಅಂತ ಉದಯಪುರದಲ್ಲಿ ನಡೆದ ಸಮಾವೇಶದಲ್ಲಿ ಘೋಷಣೆ ಮಾಡಿದ್ದು ನಿಜ, ಅದರೆ ಅನಿವಾರ್ಯ ಸಂದರ್ಭಗಳಲ್ಲಿ ಕೆಲವರಿಗೆ ಎರಡೆರಡು ಸ್ಥಾನಗಳ ಜವಾಬ್ದಾರಿ ವಹಿಸಿಕೊಡಲಾಗಿದೆ, ಡಿಕೆ ಶಿವಕುಮಾರ್ ಅವರಲ್ಲಿ ಎರಡು ಹುದ್ದೆಗಳನ್ನು ನಿಭಾಯಿಸುವ ಸಾಮರ್ಥ್ಯ ಇರೋದನ್ನು ಮನಗಂಡೇ ವರಿಷ್ಠರು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಜಾರಕಿಹೊಳಿ ಹೇಳಿದರು.
ಬೆಳಗಾವಿ: ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯನ್ನು ಬದಲಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಹಿಂದೆ ನೀಡಿದ ಉತ್ತರನ್ನೇ ಪುನರಾವರ್ತಿಸಿದರು. ಅದರ ಬಗ್ಗೆ ತನಗೇನೂ ಮಾಹಿತಿಯಿಲ್ಲ, ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆ ನಡೆದಿದೆ ಅಂತ ಗೊತ್ತಿಲ್ಲ, ಸಿದ್ದರಾಮಯ್ಯ ಎಷ್ಟು ತಿಂಗಳು ಅವಧಿಗೆ ಅಥವಾ ಪೂರ್ಣಾವಧಿಗೆ ಸಿಎಂ ಅಂತ ತೀರ್ಮಾನಿಸಲಾಗಿದಿಯೇ ಅನ್ನೋದು ತಿಳಿದಿಲ್ಲ, ಅದು ಹೈಕಮಾಂಡ್, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ನಡೆಸಿರುವ ಚರ್ಚೆ ಎಂದು ಜಾರಕಿಹೊಳಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
Latest Videos