ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

Edited By:

Updated on: Mar 02, 2026 | 1:29 PM

ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಗೊಂದಲ ಮತ್ತು ಅನಿಶ್ಚಿತತೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. ಶಾಸಕರು, ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂಬುದನ್ನು ಒಪ್ಪಿಕೊಂಡಿರುವ ಅವರು, ಪರಿಸ್ಥಿತಿ ತಿಳಿಗೊಳಿಸಲು ಹೈಕಮಾಂಡ್ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ದಾವಣಗೆರೆ, ಮಾರ್ಚ್​ 02: ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ. ಹೈಕಮಾಂಡ್ ಒಂದು ದಿನದಲ್ಲಿಯೇ ಈ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us