ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ

Edited By:

Updated on: Oct 09, 2024 | 10:33 PM

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ಗುಸುಗುಸು ನಡುವೆ ಸ್ವಾಮೀಜಿ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಸಮುದಾಯ ಅವರ ಬೆನ್ನಿಗೆ ನಿಲ್ಲಲಿದೆ ಎಂದಿದ್ದಾರೆ.

ಬೆಂಗಳೂರು, ಅಕ್ಟೋಬರ್​ 09: ಸತೀಶ್ ಜಾರಕಿಹೊಳಿ (Satish Jarkiholi) ಸಿಎಂ ಆಗಲಿ ಎಂದು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೆ ವಾಲ್ಮೀಕಿ, ಪರಿಶಿಷ್ಟ ಪಂಗಡದಿಂದ ಯಾರೂ ಸಿಎಂ ಆಗಿಲ್ಲ. ಅಂತಹ ಸಂದರ್ಭ ಬಂದರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ. ಸತೀಶ್ ಸಿಎಂ ಆಗುವುದಾದರೆ ವಾಲ್ಮೀಕಿ ಪೀಠ, ಸಮುದಾಯ ಬೆಂಬಲಿಸಲಿದೆ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
TV9 Web

TV9 Kannada

Read More