ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ? ಜಾರಕಿಹೊಳಿ ಏನಂದ್ರು ನೋಡಿ

Updated on: May 29, 2026 | 2:29 PM

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ನ ಒಪ್ಪಂದದಂತೆ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಹಿ ಸಂಗ್ರಹ ಆರೋಪಗಳನ್ನು ಅವರು ತಳ್ಳಿಹಾಕಿದರು. ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿಯೇ ಇರಲಿದ್ದಾರೆ ಮತ್ತು ಅವರ ಅನುಭವವನ್ನು ಹೊಸ ಸರ್ಕಾರ ರಚನೆಯಾದ ನಂತರ ಸೂಕ್ತ ಸಮಯದಲ್ಲಿ ಬಳಸಿಕೊಳ್ಳಲಾಗುವುದು ಎಂದರು.

ಬೆಂಗಳೂರು, ಮೇ 29: ಸಿದ್ದರಾಮಯ್ಯ ಬೆನ್ನಿಗೆ ಅವರ ಆಪ್ತರು ಚೂರಿ ಹಾಕಿದ ಆರೋಪಗಳಿಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ನ ಪೂರ್ವ ನಿರ್ಧರಿತ ಒಪ್ಪಂದದಂತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದು ಯಾವುದೇ ರೀತಿಯ ಆಂತರಿಕ ರಾಜಕೀಯ ಸಂಘರ್ಷದ ಪ್ರಶ್ನೆಯೇ ಅಲ್ಲ ಎಂದು ಜಾರಕಿಹೊಳಿ ದೃಢಪಡಿಸಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆದಿರುವ ವರದಿಗಳನ್ನು, ಆರೋಪಗಳನ್ನು ಸುಳ್ಳು ಎಂದು ಜಾರಕಿಹೊಳಿ ತಳ್ಳಿಹಾಕಿದರು. ಅಂತಹ ಯಾವುದೇ ಸಹಿ ಹೈಕಮಾಂಡ್‌ಗೆ ತಲುಪಿಲ್ಲ ಅಥವಾ ಅದರ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದರು. ಇದು ಯಾರೋ ವಾಟ್ಸ್‌ಆ್ಯಪ್ ಅಥವಾ ಟ್ವೀಟರ್‌ನಲ್ಲಿ ಹರಿಬಿಟ್ಟ ಸುಳ್ಳು ಸುದ್ದಿ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅನುಪಸ್ಥಿತಿ ಕಾಂಗ್ರೆಸ್‌ಗೆ ಕಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ರಾಜ್ಯ ರಾಜಕಾರಣದಲ್ಲಿಯೇ ಇರಲಿದ್ದಾರೆ ಎಂದರು. 2028ರಲ್ಲಿ ಪಕ್ಷವನ್ನು ಗೆಲ್ಲಿಸಲು ಕೆಲಸ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟ ರಚನೆಯಾದ ನಂತರ ಅವರ ಅನುಭವವನ್ನು ಪಕ್ಷವು ಸೂಕ್ತ ಸಮಯದಲ್ಲಿ ಬಳಸಿಕೊಳ್ಳಲಿದೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More