ಸಿಎಂ ಮತ್ತು ಡಿಸಿಎಂರಂತೆ ದೆಹಲಿಯಲ್ಲಿರುವ ಸತೀಶ್ ಜಾರಕಿಹೊಳಿ ತಾನು ಬಂದಿರೋ ಕಾರಣ ಬೇರೆ ಎಂದರು

ಅರುಣ್​ ಕುಮಾರ್​ ಬೆಳ್ಳಿ

Updated on: Jun 10, 2025 | 12:10 PM

ತಾನು ದೆಹಲಿಗೆ ಭೇಟಿ ನೀಡುವುದು ಪೂರ್ವ ನಿಯೋಜಿತವಾಗಿತ್ತು, ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕಿದೆ ಎಂದು ಹೇಳಿದ ಸತೀಶ್ ಜಾರಕಿಹೊಳಿ, ಕಾಲ್ತುಳಿತ ಘಟನೆಗೆ ಯಾರು ಕಾರಣ, ತಪ್ಪಿತಸ್ಥರು ಯಾರು ಅಂತ ವರದಿ ಬಂದ ನಂತರವೇ ಗೊತ್ತಾಗುತ್ತದೆ, ವರದಿಗಾಗಿ ಇನ್ನೂ 15ದಿನ ಇಲ್ಲವೇ ಒಂದು ತಿಂಗಳು ಕಾಯದೆ ವಿಧಿಯಿಲ್ಲ ಎಂದರು.

ದೆಹಲಿ, ಜೂನ್ 10: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ ಮತ್ತು ನಿನ್ನೆ ಬೆಂಗಳೂರಲ್ಲಿದ್ದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ಹೋಗಿದ್ದಾರೆ. ನಮ್ಮ ದೆಹಲಿ ವರದಿಗಾರ ಸತೀಶ್ ಅವರೊಂದಿಗೆ ಮಾತಾಡಿದ್ದು, ತನ್ನ ಮತ್ತು ಸಿಎಂ, ಡಿಸಿಎಂ ಭೇಟಿಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಮತ್ತು 11 ಜನರ ಸಾವಿನ ಬಗ್ಗೆ ವಿವರಣೆ ಕೇಳಲು ಸಿಎಂ ಮತ್ತು ಡಿಸಿಎಂರನ್ನು ಕರೆಸಲಾಗಿದೆ, ಇಂಥ ಘಟನೆಗಳು ನಡೆದಾಗ ಹೈಕಮಾಂಡ್​ಗೆ ಮುಖ್ಯಮಂತ್ರಿಯವರು ವಿವರಣೆ ನೀಡಬೇಕಿರುವುದು ಸ್ವಾಭಾವಿಕ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ಅಧಿಕಾರ ಶಾಶ್ವತ ಅಲ್ಲ, ಚಕ್ರ ತಿರುಗುತ್ತಲೇ ಇರತ್ತೆ: ರಾಮನಗರ ಹೆಸರು ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಮಾರ್ಮಿಕ ಹೇಳಿಕೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.