ಕಬ್ಬಿಣದ ಅದಿರು ಅಕ್ರಮ ಸಂಗ್ರಹ ಆರೋಪ ಸತೀಶ್ ಸೈಲ್ ಮೇಲೆ 2009ರಿಂದ ಇದೆ: ಪರಮೇಶ್ವರ್

Updated on: Oct 25, 2024 | 12:27 PM

ಮುಡಾ ಹಗರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಕಾನೂನು ಚೌಕಟ್ಟನಲ್ಲಿ ಅದಕ್ಕೆ ಅವಕಾಶವಿದೆ, ಹಾಗಾಗಿ ಸಿಂಗಲ್ ಬೆಂಚ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಡಬಲ್ ಬೆಂಚ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ನಿನ್ನೆ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ನಡೆದಿದ್ದು ಹಿಂದೆಯೂ ಅವರನ್ನು ಅರೆಸ್ಟ್ ಮಾಡಲಾಗಿತ್ತು ಎಂದು ಹೇಳಿದರು. ಅಕ್ರಮ ಗಣಿಕೆಗಾರಿಕೆ ನಡೆಸಿದ ಮತ್ತು ಬೆಳೆಕೇರಿ ಪೋರ್ಟ್​ನಲ್ಲಿ ಲಕ್ಷಾಂತರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಂಗ್ರಹಿಟ್ಟ ಆರೋಪ ಅವರ ಮೇಲಿದೆ. ಪ್ರಕರಣದಲ್ಲಿ ವಿಚಾರಣೆ ಮುಂದುವರಿಸಿರುವ ನ್ಯಾಯಾಲಯವು ಸೈಲ್ ಮತ್ತು ಇತರ 9 ಜನರ ಬಂಧನಕ್ಕೆ ಆದೇಶ ನೀಡಿದೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್​ರನ್ನು ಬಂಧಿಸಲಾಗುವುದು: ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More