AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಅಧಿಕಾರಿಗಳಿಂದ ಮೊದಲ ಸಭೆ

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಅಧಿಕಾರಿಗಳಿಂದ ಮೊದಲ ಸಭೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 01, 2026 | 3:54 PM

Share

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ರಚಿಸಲಾದ ವಿಶೇಷ ತನಿಖಾ ದಳ ಅಧಿಕೃತವಾಗಿ ಮಂಗಳೂರಿನ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದೆ. 2012ರ ಪ್ರಕರಣದ ಮರುತನಿಖೆ ಇಂದಿನಿಂದ ಶುರುವಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕಿದೆ. ಐಪಿಎಸ್ ಅಧಿಕಾರಿ ನಿಷಾ ಜೇಮ್ಸ್ ನೇತೃತ್ವದ 16 ಸದಸ್ಯರ ತಂಡ ತನಿಖೆ ನಡೆಸಲಿದೆ.

ಮಂಗಳೂರು, ಅಕ್ಟೋಬರ್​ 01: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ದಳ ಈಗಾಗಲೇ ರಚಿಸಲಾಗಿದ್ದು, ಮಂಗಳೂರಿನ ಹಳೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್​​ಐಟಿ ತನಿಖಾ ಕಚೇರಿ ಸಿದ್ಧವಾಗಿದೆ. ಆ ಮೂಲಕ 2012ರ ಅಕ್ಟೋಬರ್ 9ರಂದು ನಡೆದಿದ್ದ ಪ್ರಕರಣದ ಮರುತನಿಖೆ ಇಂದಿನಿಂದ ಶುರುವಾಗಿದೆ. ಈಗಾಗಲೇ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿದ್ದು, ಎಸ್ಐಟಿ ಮುಖ್ಯಸ್ಥ ಡಿಐಜಿಪಿ ಎನ್.ಶಶಿಕುಮಾರ್ ನೇತೃತ್ವದಲ್ಲಿ ಇಂದು ಮೊದಲ ಸಭೆ ಕೂಡ ನಡೆದಿದೆ. ಐಪಿಎಸ್ ಅಧಿಕಾರಿಗಳಾದ ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಬಸಪ್ಪ ಜಗಲಾಸರ್ ಸೇರಿದಂತೆ ಮಂಗಳೂರು, ರಾಜ್ಯದ ಬೇರೆಡೆಯ 16 ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಭಾಗಿ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

 

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More