AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್

ಝಾಹಿರ್ ಯೂಸುಫ್
|

Updated on:Feb 08, 2026 | 12:31 PM

Share

India vs United States of America, ICC Men's T20 World Cup 2026: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬ್ಯಾಟರ್​ಗಳು 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್ ಯಾರು? ಈ ಪ್ರಶ್ನೆಗೆ ಉತ್ತರ ಸೌರಭ್ ನೇತ್ರವಲ್ಕರ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೌರಭ್ ನೇತ್ರವಲ್ಕರ್ 4 ಓವರ್​ಗಳಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 65 ರನ್​ಗಳು.

ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು.

2007 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಸನತ್ ಜಯಸೂರ್ಯ 4 ಓವರ್​ಗಳಲ್ಲಿ ಬರೋಬ್ಬರಿ 64 ರನ್ ನೀಡಿದ್ದರು. ಇದಾದ ಬಳಿಕ ಯಾವುದೇ ಬೌಲರ್ ಇಷ್ಟೊಂದು ದುಬಾರಿಯಾಗಿರಲಿಲ್ಲ.

ಆದರೆ ಸೌರಭ್ ನೇತ್ರವಲ್ಕರ್ ಓವರ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದಿದ್ದಾರೆ. ಪರಿಣಾಮ ಸೌರಭ್ ಕಡೆಯಿಂದ 4 ಓವರ್​ಗಳಲ್ಲಿ ಬರೋಬ್ಬರಿ 65 ರನ್​ಗಳು ಮೂಡಿಬಂದಿವೆ.  ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬ್ಯಾಟರ್​ಗಳು 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

Published on: Feb 08, 2026 12:03 PM