‘ಭಾರತ-ಪಾಕಿಸ್ತಾನದ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ವಿಶ್ವಸಂಸ್ಥೆಯಲ್ಲಿ ಮತ್ತೆ ಹಳೆ ರಾಗ ಹಾಡಿದ ಟ್ರಂಪ್

Updated on: Sep 22, 2026 | 10:44 PM

ಡೊನಾಲ್ಡ್ ಟ್ರಂಪ್ ಅವರು ಭಾರತ-ಪಾಕಿಸ್ತಾನ ಯುದ್ಧ ತಡೆದ ಬಗ್ಗೆ ಈ ಹಿಂದೆಯೂ ಹಲವು ಬಾರಿ ಪ್ರತಿಪಾದಿಸಿದ್ದರೂ, ಭಾರತ ಸರ್ಕಾರವು ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕುತ್ತಾ ಬಂದಿದೆ. ಪಾಕಿಸ್ತಾನದೊಂದಿಗಿನ ಯಾವುದೇ ಸಂಘರ್ಷ ಅಥವಾ ಗಡಿ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವಾಗಿದ್ದು, ಇದರಲ್ಲಿ ಯಾವುದೇ ಮೂರನೇ ದೇಶ ಅಥವಾ ವ್ಯಕ್ತಿಯ (ಅಮೆರಿಕ ಸೇರಿದಂತೆ) ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪಿಲ್ಲ ಮತ್ತು ಸ್ವೀಕರಿಸಿಲ್ಲ ಎಂಬುದನ್ನು ಭಾರತ ಸ್ಪಷ್ಟಪಡಿಸಿದೆ.

ನ್ಯೂಯಾರ್ಕ್, ಸೆಪ್ಟೆಂಬರ್ 22: ವಿಶ್ವಸಂಸ್ಥೆಯ ಮಹಾಸಭೆಯ (UNGA) 81ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಡೆಯುವ ಮೂಲಕ ಸುಮಾರು 3 ಕೋಟಿ (30 ಮಿಲಿಯನ್) ಜನರ ಜೀವ ಉಳಿಸಿರುವುದಾಗಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ.  ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಅವರೇ ಈ ವಿಷಯವನ್ನು ತಮ್ಮ ಬಳಿ ಹೇಳಿ ಧನ್ಯವಾದ ಅರ್ಪಿಸಿದ್ದರು ಎಂದು ಟ್ರಂಪ್ ವಿಶ್ವಸಂಸ್ಥೆಯ ವೇದಿಕೆಯಲ್ಲಿ ಹಳೇ ರಾಗ ಹಾಡಿದ್ದಾರೆ.

“ಪಾಕಿಸ್ತಾನದ ಪ್ರಧಾನಿ ಅತ್ಯುತ್ತಮ ವ್ಯಕ್ತಿ. ಡೊನಾಲ್ಡ್ ಟ್ರಂಪ್ ಅವರು 3 ಕೋಟಿ ಹಾಗೂ ಅದಕ್ಕಿಂತಲೂ ಹೆಚ್ಚಿನ ಜನರ ಜೀವಗಳನ್ನು ಉಳಿಸಲು ಕಾರಣಕರ್ತರಾಗಿದ್ದಾರೆ ಎಂದು ಸ್ವತಃ ಅವರೇ ಹೇಳಿದ್ದರು” ಎಂದು ಟ್ರಂಪ್ ವಿಶ್ವನಾಯಕರ ಸಮ್ಮುಖದಲ್ಲಿ ಹೇಳಿದ್ದಾರೆ.  2025ರ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಎದುರಾಗಿದ್ದ ತೀವ್ರ ಸಶಸ್ತ್ರ ಸಂಘರ್ಷವನ್ನು ತಾವೇ ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದ್ದಾಗಿ ಟ್ರಂಪ್ ಮತ್ತೆ ನೆನಪಿಸಿಕೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ಯುದ್ಧ ತಡೆದ ಬಗ್ಗೆ ಈ ಹಿಂದೆಯೂ ಹಲವು ಬಾರಿ ಪ್ರತಿಪಾದಿಸಿದ್ದರೂ, ಭಾರತ ಸರ್ಕಾರವು ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕುತ್ತಾ ಬಂದಿದೆ. ಪಾಕಿಸ್ತಾನದೊಂದಿಗಿನ ಯಾವುದೇ ಸಂಘರ್ಷ ಅಥವಾ ಗಡಿ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವಾಗಿದ್ದು, ಇದರಲ್ಲಿ ಯಾವುದೇ ಮೂರನೇ ದೇಶ ಅಥವಾ ವ್ಯಕ್ತಿಯ (ಅಮೆರಿಕ ಸೇರಿದಂತೆ) ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪಿಲ್ಲ ಮತ್ತು ಸ್ವೀಕರಿಸಿಲ್ಲ ಎಂಬುದನ್ನು ಭಾರತ ಸ್ಪಷ್ಟಪಡಿಸಿದೆ.

 

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us