ಬೆಂಗಳೂರಿನಲ್ಲಿ ಒಳಮೀಸಲಾತಿ ಜ್ವಾಲೆ ಧಗ ಧಗ, ಫ್ರೀಡಂಪಾರ್ಕ್ ಸುತ್ತಮುತ್ತ ಫುಲ್ ಟ್ರಾಫಿಕ್

Updated on: Sep 10, 2025 | 5:33 PM

ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.

ಬೆಂಗಳೂರು, (ಸೆಪ್ಟೆಂಬರ್ 10): ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More