ರಾಜ್ಯಕ್ಕೆ ಇದು ಗುಡ್ ನ್ಯೂಸ್: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್
ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕದ ಜನತೆಗೆ ಧನ್ಯವಾದ ಅರ್ಪಿಸಿದರು. ಮೂವರು ನ್ಯಾಯಾಧೀಶರ ಪೀಠವು ಅರ್ಜಿಯನ್ನು ತಿರಸ್ಕರಿಸಿದ್ದು, ಕರ್ನಾಟಕಕ್ಕೆ ಇದು ಶುಭಸುದ್ದಿಯಾಗಿದೆ. ಹೊಸ ಡಿಪಿಆರ್ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಅವರು ತಿಳಿಸಿದರು.
ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ಹೇಳಿದರು. ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಕರ್ನಾಟಕದ ಪರವಾಗಿಯೇ ಇತ್ತು. ಇದೀಗ ತಮಿಳುನಾಡಿನ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವುದರಿಂದ, ಮೇಕೆದಾಟು ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಹೆಚ್ಚಿನ ಅನುಕೂಲವಾಗಿದೆ. ನಾವು ಈಗಾಗಲೇ ಹೊಸ ಡಿಪಿಆರ್ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಅವರು ವಿವರಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

