ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !

Edited By:

Updated on: May 11, 2026 | 1:14 PM

ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು.

ಮೈಸೂರು, ಮೇ 11: ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು.

ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ ಗಾಜು ಹ್ಯಾಮರ್‌ನಿಂದ ಹೊಡೆದರೂ ಒಡೆಯಲಿಲ್ಲ, ಇದರಿಂದಾಗಿ ಅಪಾಯದ ಸಂದರ್ಭದಲ್ಲಿ ಮಕ್ಕಳನ್ನು ಹೊರಗೆ ತರಲು ಸಾಧ್ಯವಿಲ್ಲ. ಅಲ್ಲದೆ, ವಾಹನಕ್ಕೆ ಎಂಟು ತಿಂಗಳ ಹಿಂದೆಯೇ ಎಫ್‌ಸಿ ಅವಧಿ ಮುಗಿದಿದ್ದು, ವಿಮೆ ಮತ್ತು ತೆರಿಗೆ ಪಾವತಿಯಾಗಿರಲಿಲ್ಲ. ಎರಡನೇ ವಾಹನದಲ್ಲಿ ಯಾವುದೇ ಶಾಲೆಯ ವಿವರಗಳು ಇರಲಿಲ್ಲ. ಮಕ್ಕಳ ಭದ್ರತೆ ದೃಷ್ಟಿಯಿಂದ ಇಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಎಆರ್​ಟಿಓ ರಾಜ್‌ಕುಮಾರ್ ತಿಳಿಸಿದ್ದಾರೆ. ಈಗಾಗಲೇ 138 ವಾಹನಗಳಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More