ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಕಲಬುರಗಿಯಲ್ಲಿ ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಶಾಲಾ ಮಕ್ಕಳು ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಹದಗೆಟ್ಟ ರಸ್ತೆಯಿಂದ ಪ್ರತಿದಿನ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮಕ್ಕಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ಸಲಿಕೆ, ಪಿಕಾಸಿ ಹಿಡಿದು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಅಧಿಕಾರಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಲಬುರಗಿ, ನವೆಂಬರ್ 04: ರಸ್ತೆ ಸರಿಪಡಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಕ್ರಮ ಕೈಗೊಳ್ಳದ ಕಾರಣ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಶಾಲಾ ಮಕ್ಕಳೇ ರಸ್ತೆ ದುರಸ್ತಿ ಮಾಡಿದ್ದಾರೆ. ಕಾದರಗಿಯಿಂದ ಬಸವಕಲ್ಯಾಣ ತಾಲೂಕಿಗೆ ಹೋಗುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚಾರ ಮಾಡಬೇಕಿತ್ತು. ಹೀಗಿದ್ದರೂ ಅಧಿಕಾರಿಗಳು ತಲೆಕೆಡಿಸಿಕೊಳ್ಳದ ಕಾರಣ ಶಾಲಾ ಮಕ್ಕಳೇ ರಸ್ತೆ ದುರಸ್ತಿ ನಡೆಸಿದ್ದಾರೆ. ಸುಮಾರು ನಾಲ್ಕರಿಂದ ಐದು ಕಿಲೋಮೀಟರ್ ರಸ್ತೆಯನ್ನು ದುರಸ್ತಿಪಡಿಸಿದ ಮಕ್ಕಳ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಮಕ್ಕಳ ಈ ಕಾರ್ಯದಿಂದಾರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

