ಮಳೆ…ಮಳೆ…ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಆದ್ರೆ, ಕಳೆದ ಎರಡ್ಮೂರು ದಿನನಗಳಲ್ಲಿ ವರುಣ ಅಬ್ಬರ ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ನಾಳೆಯೂ (ಜೂನ್ 28) ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಸಹ ದಕ್ಷಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು, (ಜೂನ್ 27): ಕರ್ನಾಟಕದಲ್ಲಿ ಸುರಿಯುತ್ತಿರುವ ಆರಿದ್ರ ಮಳೆ ಒಂದೊಂದೆ ಕಂಟಕಗಳನ್ನ ಸೃಷ್ಟಿ ಮಾಡ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಎಡಬಿಡದೆ ದೋ ಅಂತ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಎರಡು ದಿನದಲ್ಲಿ ಏಳು ಜೀವಗಳು ಬಲಿಯಾಗಿವೆ. ಅಲ್ಲದೇ ನಾಳೆಯೂ ಸಹ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ (ಜೂನ್ 28) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯೂ ಸಹ ಜಿಲ್ಲೆಯ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಲಾಗಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಜನರು ದುರ್ಮರಣ
ಭಾರೀ ಮಳೆಯಿಂದ ಇಂದು(ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿತ್ತು. ಅದು ನಾಳೆಯೂ ಸಹ ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೂ ರಜೆ ಮುಂದುವರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದ್ದು, ನದಿ ಮತ್ತು ಸಮುದ್ರ ತೀರದ ಜನರು ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ