ಬೆಂಗಳೂರಿನಲ್ಲಿ ವಾಹನ ಓಡಾಡುವ ರಸ್ತೆಗಳು ಮಾತ್ರವಲ್ಲ, ಮನಷ್ಯರು ತಿರುಗಾಡುವ ಫುಟ್​​​ಬಾತ್​​​ಗಳು ಸರಿ ಇಲ್ಲ

Updated on: Feb 06, 2026 | 5:48 PM

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ದಿಢೀರ್ ಚರಂಡಿಗೆ ಬಿದ್ದಿದ್ದಾನೆ. ಬೆಂಗಳೂರಿನ ಸರ್ವಜ್ಞನಗರದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು, (ಫೆಬ್ರವರಿ 06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ವಾಹನ ಓಡಾಡಲು ರಸ್ತೆಗಳು ಸರಿ ಇಲ್ಲ, ಇನ್ನೊಂದೆಡೆ ಮನಷ್ಯರು ಓಡಾಡುವ ಫುಟ್​​ಪಾತ್​ಗಳು ಸಹ ಸರಿ ಇಲ್ಲ. ಹೀಗಾಗಿ ಸಾರ್ವಜನಿಕರು ಫುಟ್​ಪಾತ್ ಮೇಲೆ ಓಡಾಡುವಾಗ ಹುಷಾರಾಗಿರಬೇಕು. ಯಾಕಂದ್ರೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ದಿಢೀರ್ ಚರಂಡಿಗೆ ಬಿದ್ದಿದ್ದಾನೆ. ಬೆಂಗಳೂರಿನ ಸರ್ವಜ್ಞನಗರದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ಶಾಲೆಯ ಮುಂದೆ ಕಾಮಗಾರಿ ಕೈಗೊಂಡಿದ್ದು, ಅದೆ ಮಾರ್ಗದಲ್ಲಿ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾಗ 1ನೇ ತರಗತಿ ವಿದ್ಯಾರ್ಥಿ ಚರಂಡಿಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನ್ನು ಮೇಲೆ ಎತ್ತಿದ್ದು, ಅದೃಷ್ಟವಶಾತ್ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚರಂಡಿ ಸ್ಲ್ಯಾಬ್ ಕ್ಲೋಸ್ ಮಾಡದೇ ಹಾಗೇ ಬಿಡಲಾಗಿದೆ. ಜಲಮಂಡಳಿ ನಿರ್ಲಕ್ಷ್ಯದ ಬೆನ್ನಲ್ಲೇ ಜಿಬಿಎದಿಂದಲೂ ನಿರ್ಲಕ್ಷ್ಯತನದಿಂದ ಈ ದುರ್ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 06, 2026 05:45 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More