ಪಕ್ಕದ ಮನೆಯವರೊಂದಿಗೆ ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು

Updated on: Mar 13, 2025 | 6:37 PM

ಮೊಹಾಲಿಯ ನೆರೆಹೊರೆಯವರೊಂದಿಗೆ ಪಾರ್ಕಿಂಗ್ ವಿಚಾರದಲ್ಲಿ ಜಗಳವಾಡಿ ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವನ್ನಪ್ಪಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಮೊಹಾಲಿಯ ಸೆಕ್ಟರ್ 67ರಲ್ಲಿ ಪಾರ್ಕಿಂಗ್ ವಿಚಾರದಲ್ಲಿ ನಡೆದ ಜಗಳದಲ್ಲಿ ನೆರೆಹೊರೆಯವರು ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರತಿಷ್ಠಿತ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ (IISER) ವಿಜ್ಞಾನಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೊಹಾಲಿ, (ಮಾರ್ಚ್ 13): ಪಶ್ಚಿಮ ಬಂಗಾಳ ಮೂಲದ ಅಭಿಷೇಕ್ ಸ್ವರ್ಣಕರ್ ಎಂಬ ವಿಜ್ಞಾನಿ ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು ಮತ್ತು ಡಯಾಲಿಸಿಸ್‌ನಲ್ಲಿದ್ದರು. ಸ್ವರ್ಣಕರ್ ತನ್ನ ವೃದ್ಧ ಪೋಷಕರೊಂದಿಗೆ ಮೊಹಾಲಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಐಟಿ ಉದ್ಯೋಗಿಯಾಗಿರುವ ನೆರೆಮನೆಯ ಮಾಂಟಿಗೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದಿದ್ದರೂ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ. ಈ ವಾಗ್ವಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 13, 2025 06:36 PM