ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ನೊಯ್ಡಾದಲ್ಲಿ ಕಾರು ಡಿಕ್ಕಿ ಹೊಡೆದು ಸ್ಕೂಟಿ ಓಡಿಸುತ್ತಿದ್ದ ಯುವತಿಯೊಬ್ಬಳು ಎಲಿವೇಟೆಡ್ ರಸ್ತೆಯ ಪಿಲ್ಲರ್ ಮೇಲೆ ಸಿಕ್ಕಿಬಿದ್ದಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ತಕ್ಷಣ ಕ್ರೇನ್ ತರಿಸಿ, ಆ ಯುವತಿಯನ್ನು ಕೆಳಗೆ ಇಳಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ನೊಯ್ಡಾ: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಆಕೆ ನೋಯ್ಡಾ ಸೆಕ್ಟರ್ 25ರ ಬಳಿ ಎಲಿವೇಟೆಡ್ ರಸ್ತೆಯ ಪಿಲ್ಲರ್ ಮೇಲೆ ಬಿದ್ದಿದ್ದಾಳೆ. ಸ್ವಲ್ಪ ಆಚೀಚೆಯಾಗಿದ್ದರೂ ಆಕೆ ಫ್ಲೈಓವರ್ನಿಂದ ಕೆಳಗಿನ ರಸ್ತೆಗೆ ಬೀಳುತ್ತಿದ್ದಳು. ಅದೃಷ್ಟವಶಾತ್ ಪಿಲ್ಲರ್ ಮೇಲೆ ಸಿಲುಕಿಕೊಂಡಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಕೆಯನ್ನು ರಕ್ಷಿಸಲು ಯತ್ನಿಸುತ್ತಿದ್ದ ಇಬ್ಬರನ್ನೂ ಸೇರಿದಂತೆ ಒಟ್ಟು ಮೂವರನ್ನು ಕ್ರೇನ್ ಸಹಾಯದಿಂದ ಕೆಳಗೆ ಇಳಿಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಕೆಯ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

