W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್… ಹೊಸ ಇತಿಹಾಸ ಬರೆದ ಬೋಲ್ಯಾಂಡ್

Updated on: Jul 15, 2025 | 11:08 AM

WI vs AUS: ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 143 ರನ್​ಗಳಿಸಿ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 121 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 204 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಕೇವಲ 27 ರನ್​ಗಳಿಗೆ ಆಲೌಟ್ ಆಗಿದೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 45 ಬೌಲರ್​ಗಳು ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಈ 45 ಬೌಲರ್​ಗಳಲ್ಲಿ ಡೇ ನೈಟ್ ಟೆಸ್ಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಏಕೈಕ ಬೌಲರ್ ಸ್ಕಾಟ್ ಬೋಲ್ಯಾಂಡ್. ಜಮೈಕಾದ ಸಬೀನಾ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಆಸ್ಟ್ರೇಲಿಯಾ ವೇಗಿ ಬೋಲ್ಯಾಂಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ದ್ವಿತೀಯ ಇನಿಂಗ್ಸ್​ನಲ್ಲಿ 14ನೇ ಓವರ್ ಎಸೆದ ಸ್ಕಾಟ್ ಬೋಲ್ಯಾಂಡ್ ಮೊದಲ ಎಸೆತದಲ್ಲೇ ಜಸ್ಟಿನ್ ಗ್ರೀವ್ಸ್​ (11) ವಿಕೆಟ್ ಪಡೆದರು. ಇನ್ನು ಎರಡನೇ ಎಸೆತದಲ್ಲಿ ಶಮರ್ ಜೋಸೆಫ್ (0) ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು. ಮೂರನೇ ಎಸೆತದಲ್ಲಿ ಜೊಮೆಲ್ ವ್ಯಾರಿಕನ್ (0) ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಸ್ಕಾಟ್ ಬೋಲ್ಯಾಂಡ್ ಹ್ಯಾಟ್ರಿಕ್ ವಿಕೆಟ್​ನ ಸಾಧನೆ ಮಾಡಿದರು.

ಈ ಮೂಲಕ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ವಿಶ್ವದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ಸ್ಕಾಟ್ ಬೋಲ್ಯಾಂಡ್ ತಮ್ಮದಾಗಿಸಿಕೊಂಡರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 143 ರನ್​ಗಳಿಸಿ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 121 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 204 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಕೇವಲ 27 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು 176 ರನ್​ಗಳ ಭರ್ಜರಿ ಜಯ ಸಾಧಿಸಿದೆ.