SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ! ರಾಜ್ಯಾಧ್ಯಕ್ಷ ಕೂದಲೆಳೆ ಅಂತರದಲ್ಲಿ ಪಾರು

Updated on: Feb 08, 2026 | 8:45 AM

ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

ಕೊಡಗು, ಫೆಬ್ರುವರಿ 08: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್  ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ (Car Catches Fire) ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More