ಬ್ರಹ್ಮರಕೂಟ್ಲು ಟೋಲ್‌ ಬ್ಯಾರಿಯರ್ ಕಿತ್ತು ವಾಹನಗಳನ್ನು ಫ್ರೀಯಾಗಿ ಬಿಟ್ಟ SDPI ಕಾರ್ಯಕರ್ತರು

Edited By:

Updated on: Nov 26, 2026 | 2:33 PM

ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್‌ನಲ್ಲಿ ಎಸ್​​​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬ್ಯಾರಿಯರ್ ಕಿತ್ತು ವಾಹನಗಳನ್ನು ಫ್ರೀಯಾಗಿ ಬಿಟ್ಟಿದ್ದಾರೆ. ಉಪ್ಪಿನಂಗಡಿ ಬಳಿ ನೂತನ ಟೋಲ್ ಇಂದು (ನ.26) ಉದ್ಘಾಟನೆಯಾಗಿದೆ. ಇದರಿಂದ SDPIಕಾರ್ಯಕರ್ತರು ಬಿ.ಸಿ.ರೋಡ್ ಟೋಲ್‌ಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಇದ್ದಕ್ಕಿದ್ದಂತೆ ಬ್ರಹ್ಮರಕೂಟ್ಲು ಟೋಲ್‌ಗೆ ನುಗ್ಗಿದ SDPI ಕಾರ್ಯಕರ್ತರು, ಕ್ಯಾಮೆರಾ ಜಖಂ ಮಾಡಿದ್ದಾರೆ.

ಮಂಗಳೂರು, ನವೆಂಬರ್ 26: ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್‌ನಲ್ಲಿ ಎಸ್​​​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬ್ಯಾರಿಯರ್ ಕಿತ್ತು ವಾಹನಗಳನ್ನು ಫ್ರೀಯಾಗಿ ಬಿಟ್ಟಿದ್ದಾರೆ. ಉಪ್ಪಿನಂಗಡಿ ಬಳಿ ನೂತನ ಟೋಲ್ ಇಂದು (ನ.26) ಉದ್ಘಾಟನೆಯಾಗಿದೆ. ಇದರಿಂದ SDPIಕಾರ್ಯಕರ್ತರು ಬಿ.ಸಿ.ರೋಡ್ ಟೋಲ್‌ಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಇದ್ದಕ್ಕಿದ್ದಂತೆ ಬ್ರಹ್ಮರಕೂಟ್ಲು ಟೋಲ್‌ಗೆ ನುಗ್ಗಿದ SDPI ಕಾರ್ಯಕರ್ತರು, ಕ್ಯಾಮೆರಾ ಜಖಂ ಮಾಡಿದ್ದಾರೆ. ಅಲ್ಲದೇ ಬೂಮ್ ಬ್ಯಾರಿಯರ್ ಕಿತ್ತು, ಟೋಲ್‌ ಸಂಗ್ರಹಿಸದೆ ವಾಹನಗಳನ್ನು ಬಿಟ್ಟು ಕಳಿಸಿದ್ದಾರೆ. ಈ ವೇಳೆ ಟೋಲ್‌ ಸಿಬ್ಬಂದಿಗೂ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿ SDPI ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More