20 ಅಡಿ ಆಳದ ಬಾವಿಗೆ ಬಿದ್ದಿದ್ದ ಕುದುರೆ ರಕ್ಷಣೆಯ ರೋಚಕ ವಿಡಿಯೋ ವೈರಲ್

ಮೂರು ಅಡಿ ಅಗಲ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದ ಕುದುರೆ ರಕ್ಷಣೆ ಮಾಡಲಾಗಿದ್ದು, ಇದೀಗ ರಕ್ಷಣಾ ರೋಚಕ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ: 20 ಅಡಿ ಆಳದ ಬಾವಿಗೆ ಬಿದ್ದಿದ್ದ ಕುದುರೆಯನ್ನು ರಕ್ಷಣೆ ಮಾಡಲಾಗಿದೆ. ಬೆಳಗಾವಿ ಹೊರವಲಯ ಖಾಸಬಾಗ್‌ನ ಟೀಚರ್ಸ್ ಕಾಲೋನಿಯಲ್ಲಿ ನವೀನ್ ಹೇರೇಕರ್ ಎಂಬುವರ ಮನೆ ಎದುರು ನಿರ್ಮಿಸಿದ್ದ ಮೂರು ಅಡಿ ಅಗಲ 20 ಅಡಿ ಆಳದ ಬಾವಿಯಲ್ಲಿ ಕುದುರೆ ಬಿದ್ದಿತ್ತು. ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ, ಎಸ್‌ಡಿಆರ್‌ಎಫ್ ಸಿಬ್ಬಂದಿಯಿಂದ ಕುದುರೆಯನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ.   ಅಲ್ಲದೇ ಸೂಕ್ತ ಸುರಕ್ಷಾ ಕ್ರಮ ಅನುಸರಿಸಲು ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಕುದುರೆ ರಕ್ಷಣೆ ಮಾಡಿದ ರೋಚಕ ವಿಡಿಯೋ ವೈರಲ್ ಆಗಿದೆ.

ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us