ಚರಂಡಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಆಶ್ಚರ್ಯಕರ ರೀತಿಯಲ್ಲಿ ರಕ್ಷಿಸಿದ ಎಸ್ಡಿಆರ್ಎಫ್
ಚರಂಡಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಶ್ಚರ್ಯಕರ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ಕಲಬುರಗಿ ನಗರದ ಲಾಲಗೇರಿ ಕ್ರಾಸ್ ಬಳಿ ನಡೆದಿದೆ.
ಕಲಬುರಗಿ: ಚರಂಡಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಶ್ಚರ್ಯಕರ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ಕಲಬುರಗಿ ನಗರದ ಲಾಲಗೇರಿ ಕ್ರಾಸ್ ಬಳಿ ನಡೆದಿದೆ. ಮಲ್ಲಣ್ಣ ಮಡಿವಾಳ (57) ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಮಲ್ಲಣ್ಣ ಬೈಕ್ ಮೇಲೆ ತೆರಳುತ್ತಿದ್ದಾಗ ಆಯಾ ತಪ್ಪಿ ಪಕ್ಕದ ಚರಂಡಿಯಲ್ಲಿ ಬಿದ್ದಿದ್ದಾರೆ. ಮಲ್ಲಣ್ಣ ಚರಂಡಿಯಲ್ಲಿ ನೀರಿನ ನೀರಿನ ರಭಸಕ್ಕೆ ಚರಂಡಿಯಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೂಡಲೇ ಸ್ಥಳಿಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಮತ್ತು ಎಸ್ಡಿಆರ್ಎಫ್ ತಂಡ ಸ್ಥಳಕ್ಕೆ ಧಾವಿಸಿ ಮಲ್ಲಣ್ಣನನ್ನು ರಕ್ಷಣೆ ಮಾಡಿದ್ದಾರೆ.
Latest Videos