ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

Edited By:

Updated on: Apr 10, 2026 | 11:16 AM

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರ ಬಳಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾಳೆ. ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ತೀವ್ರ ಶೋಧ ಕಾರ್ಯ ನಡೆದಿದ್ದರೂ, ಬಾಲಕಿ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಬಾಲಕಿ ಅಲ್ಲೇ ಬಿದ್ದಿದ್ದಾಳೆಯೇ ಅಥವಾ ಬೇರೆಡೆ ಹೋಗಿದ್ದಾಳೆಯೇ ಎಂಬ ಅನುಮಾನದ ಮೇಲೆ ತನಿಖೆ ಮುಂದುವರೆದಿದೆ.

ಚಿಕ್ಕಮಗಳೂರು, ಏಪ್ರಿಲ್​​ 10: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ಇನಾಮು ದತ್ತಾತ್ರೇಯ ಬಾಬುಡಂ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ಎಸ್ಡಿಆರ್ಎಫ್, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಎನ್ಎಫ್ ತಂಡಗಳು ಸೇರಿ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಬಳಸಲಾಗಿದೆಯಾದರೂ, ಬಾಲಕಿ ಬಗ್ಗೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಬಾಲಕಿ ಎಲ್ಲಾದರೂ ಬಿದ್ದಿದ್ದಾಳಾ ಅಥವಾ ಬೇರೆಡೆ ಹೋಗಿದ್ದಾಳೆ ಎಂಬ ಅನುಮಾನದ ಮೇಲೆ ತನಿಖೆ ಮುಂದುವರಿದಿದೆ. ಕೇರಳದಿಂದಲೂ ಪೊಲೀಸರ ತಂಡ ಆಗಮಿಸಿದ್ದು, ಪೋಷಕರ ಮೊಬೈಲ್ ಕರೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us