ಇನ್ನೊಂದು ವಾರದಲ್ಲಿ ಹಾಸನ ಕ್ಷೇತ್ರ ಸೇರಿದಂತೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ: ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ದೇವೇಗೌಡರ ಅನುಮತಿ ಪಡೆದು ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಮ್ ಇಬ್ರಾಹಿಂ ಮತ್ತು ಪಕ್ಷದ ಇತರ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದೆ ಎಂದು ಅವರು ಹೇಳಿದರು.
ಬೆಂಗಳೂರು: ಬೆಂಗಳೂರಲ್ಲಿ ಇಂದು ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲ್ಲಿ ಸ್ಪರ್ಧಿಸಲಿರುವ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೊಂದು ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ನಿರ್ದಿಷ್ಟವಾಗಿ ಹಾಸನ ಕ್ಷೇತ್ರದ ಬಗ್ಗೆ ಕೇಳಿದ ಅವರು, ಆ ಕ್ಷೇತ್ರದ ಅಭ್ಯರ್ಥಿಯ ಹೆಸರು ಸಹ ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ ಎಂದು ಹೇಳಿದರು. ಹೆಚ್ ಡಿ ದೇವೇಗೌಡರ (HD Devegowda) ಅನುಮತಿ ಪಡೆದು ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಮ್ ಇಬ್ರಾಹಿಂ (CM Ibrahim) ಮತ್ತು ಪಕ್ಷದ ಇತರ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದೆ ಎಂದು ಅವರು ಹೇಳಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 18, 2023 06:39 PM
Latest Videos