ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್

ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್

ಸುಷ್ಮಾ ಚಕ್ರೆ
|

Updated on: Oct 22, 2024 | 7:49 PM

ತಮಿಳುನಾಡಿನ ಮಹಾಬಲಿಪುರಂನಲ್ಲಿ ತಮ್ಮ ಕಾರನ್ನು 'ನೋ ಪಾರ್ಕಿಂಗ್ ಜೋನ್'ಗೆ ಪ್ರವೇಶಿಸದಂತೆ ತಡೆದ ನಂತರ ಭದ್ರತಾ ಸಿಬ್ಬಂದಿಯ ಮೇಲೆ ಮಹಿಳೆ ಹಾಗೂ ಆಕೆಯ ಸಹಚರರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. 

ಚೆನ್ನೈ: ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರವಾಸಿಗರ ದುರ್ವರ್ತನೆಯ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಮಿಳುನಾಡು ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್ ತಮ್ಮ ಕಾರನ್ನು ಟ್ಯಾಪ್ ಮಾಡಿದ್ದಾರೆ ಎಂದು ವಾಹನದಲ್ಲಿದ್ದವರು ಆರೋಪಿಸಿದ್ದರಿಂದ ಗಲಾಟೆ ಉಂಟಾಗಿದೆ. ಸೆಕ್ಯೂರಿಟಿ ಗಾರ್ಡ್ ತಮ್ಮನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ