ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ…

|

Updated on: Oct 04, 2024 | 7:32 PM

ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ಸಮೀಪ ಇರುವ ಹಮ್ಸಿದ್ ಕಾಂಪ್ಲೆಕ್ಸ್​ನ ಪಾರ್ಕಿಂಗ್ ಕಟ್ಟಡದ ಭೂಮಿ ಪೂಜೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ನೆರವೇರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಜಮೀರ್ ಅಹ್ಮದ್ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಪಾಷಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಬೆಂಗಳೂರು, ಅ.04: ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ಸಮೀಪ ಇರುವ ಹಮ್ಸಿದ್ ಕಾಂಪ್ಲೆಕ್ಸ್​ನ ಪಾರ್ಕಿಂಗ್ ಕಟ್ಟಡದ ಭೂಮಿ ಪೂಜೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ನೆರವೇರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಜಮೀರ್ ಅಹ್ಮದ್ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿ, ‘ಎರಡು ಅಂತಸ್ತಿನ ಕೆಳ ಮಹಡಿಯ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇಸಿದ್ದೇನೆ. ಇದರ ಮೇಲೆ‌ ಅಡಿಟೋರಿಯಂ ಸಹ ನಿರ್ಮಾಣ ಆಗುತ್ತಿದೆ. ಇಲ್ಲಿ ಶಾದಿ ಮಹಲ್ ಅಗತ್ಯ ಇದೆ.
ಈ ಭಾಗದಲ್ಲಿ‌ ಡಯಾಲಿಸಿಸ್ ಕೇಂದ್ರ, ವಿದ್ಯಾರ್ಥಿನಿಯರ ಕಾಲೇಜು, ITI ಸಂಸ್ಥೆ ಸಹ ಇದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈ ಭಾಗದ ಡಯಾಲಿಸಿಸ್ ಕೇಂದ್ರ ಕ್ಲೋಸ್ ಮಾಡಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಪಾಷಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 04, 2024 07:31 PM