ಮಂಡ್ಯ: ನಡು ಬೀದಿಯಲ್ಲೇ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

|

Updated on: May 08, 2023 | 6:00 PM

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದು ದಿನ ಬಾಕಿ ಉಳಿದಿರುವಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.

ಮಂಡ್ಯ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದು ದಿನ ಬಾಕಿ ಉಳಿದಿರುವಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೋಮವಾರ ನಡೆದಿದೆ. ನಡು ಬೀದಿಯಲ್ಲೇ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದರಿಂದ ಎರಡೂ ಪಕ್ಷಗಳ ಕಡೆಯ ವಾಹನದ ಗಾಜುಗಳು ಪುಡಿ ಪುಡಿಯಾಗಿವೆ. ನಾಗಮಂಗಲದ ಐಬಿ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಇದೇ ವೇಳೆ ಪಕ್ಕದ ರಸ್ತೆಯಲ್ಲಿ ಜೆಡಿಎಸ್​​​ನ ಪ್ರಚಾರದ ವಾಹನ ಬಂದಿದೆ. ಪ್ರಚಾರದ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲೂ ತೂರಾಟ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಂತೆಯೇ ಕಾಂಗ್ರೆಸ್ ಪ್ರಚಾರದ ವಾಹನದ ಮೇಲೆ ಜೆಡಿಎಸ್ ಕಾರ್ಯಕರ್ತರು ಪ್ರತಿದಾಳಿ ನಡೆಸಿದ್ದಾರೆ. ಈ ಸಂದರ್ಭ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ್ದಾರೆ. ಇದೇ ವೇಳೆ ಜೆಡಿಎಸ್​ ಕಾರ್ಯಕರ್ತರೂ ಸಹ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ