ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ ಪ್ರಯುಕ್ತ ಕೊಪ್ಪಳ ತಾಲೂಕಿನ ಐತಿಹಾಸಿಕ ಹುಲಗಿಯಲ್ಲಿರುವ ಹುಲಿಗೆಮ್ಮ ದೇವಸ್ಥಾನಕ್ಕೆ ಸೋಮವಾರ ಮುಂಜಾನೆಯೇ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದಾರೆ. ಸೂರ್ಯೋದಯಕ್ಕೂ ಮೊದಲೇ ಆಗಮಿಸಿದ ಭಕ್ತಸಾಗರ ದರ್ಶನಕ್ಕಾಗಿ ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಿದೆ. ಈ ಧಾರ್ಮಿಕ ಉತ್ಸಾಹವು ಸೀಗೆ ಹುಣ್ಣಿಮೆಯ ಮಹತ್ವವನ್ನು ಸಾರುತ್ತಿದೆ.
ಕೊಪ್ಪಳ, ಅಕ್ಟೋಬರ್ 26: ಕೊಪ್ಪಳ ತಾಲೂಕಿನ ಐತಿಹಾಸಿಕ ಹುಲಗಿ ಗ್ರಾಮದಲ್ಲಿರುವ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೀಗೆ ಹುಣ್ಣಿಮೆ ಪ್ರಯುಕ್ತ ಭಕ್ತಸಾಗರವೇ ಹರಿದು ಬಂದಿದೆ. ಈ ವರ್ಷದ ಸೀಗೆ ಹುಣ್ಣಿಮೆಯು ಅಪಾರ ಭಕ್ತರ ಸಮಾಗಮಕ್ಕೆ ಸಾಕ್ಷಿಯಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ತಾಯಿ ಹುಲಿಗೆಮ್ಮನ ದರ್ಶನ ಪಡೆಯಲು ಆಗಮಿಸಿದ್ದಾರೆ. ಸೂರ್ಯೋದಯಕ್ಕೂ ಮುನ್ನವೇ ದೇವಸ್ಥಾನದ ಆವರಣದಲ್ಲಿ ಭಕ್ತರು ಜಮಾಯಿಸಿದ್ದು, ದರ್ಶನಕ್ಕಾಗಿ ಕಾದು ನಿಂತಿದ್ದಾರೆ. ಇದೇ ವೇಳೆ ಭಕ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗುವ ಪ್ರಯತ್ನ ಮಾಡಿದ ಘಟನೆಯೂ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 26, 2026 08:08 AM
Follow Us
Latest Videos
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

