ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ರಮೇಶ್ ಜಾರಕಿಹೊಳಿ ಆಪ್ತನ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌ಗಳ ಜಪ್ತಿ
ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳ್ಕರ್ ಭಾವಚಿತ್ರ ಇರುವ ಟಿಫನ್ ಬಾಕ್ಸ್‌ಗಳು ಇದಾಗಿದ್ದು.ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜಪ್ತಿ ಮಾಡಲಾಗಿದೆ.
ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಸಾವಿರಾರು ಟಿಫನ್ ಬಾಕ್ಸ್ಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳ್ಕರ್ ಭಾವಚಿತ್ರ ಇರುವ ಟಿಫನ್ ಬಾಕ್ಸ್‌ಗಳು ಇದಾಗಿದೆ. ಮತದಾರರಿಗೆ ಗಿಫ್ಟ್ ಕೊಡಲು ಇದನ್ನ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜಪ್ತಿ ಮಾಡಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 20, 2023 09:01 AM
Latest Videos