ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ರಮೇಶ್ ಜಾರಕಿಹೊಳಿ ಆಪ್ತನ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌ಗಳ ಜಪ್ತಿ

|

Updated on: Mar 20, 2023 | 9:02 AM

ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳ್ಕರ್ ಭಾವಚಿತ್ರ ಇರುವ ಟಿಫನ್ ಬಾಕ್ಸ್‌ಗಳು ಇದಾಗಿದ್ದು.ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜಪ್ತಿ ಮಾಡಲಾಗಿದೆ.

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಸಾವಿರಾರು ಟಿಫನ್ ಬಾಕ್ಸ್​​ಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮನ್ನೋಳ್ಕರ್ ಭಾವಚಿತ್ರ ಇರುವ ಟಿಫನ್ ಬಾಕ್ಸ್‌ಗಳು ಇದಾಗಿದೆ. ಮತದಾರರಿಗೆ ಗಿಫ್ಟ್​ ಕೊಡಲು ಇದನ್ನ ಮನೆಯಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಜಪ್ತಿ ಮಾಡಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 20, 2023 09:01 AM