ದೇಶ ವಿದೇಶಗಳ ಸೆಮಿಕಂಡಕ್ಟರ್ ಉದ್ಯಮ ದಿಗ್ಗಜರಿಂದ ಪ್ರಧಾನಿ ಮೋದಿಗೆ ಪ್ರಶಂಸೆ

Updated on: Sep 11, 2024 | 11:00 AM

ನವದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಕಂಪನಿಗಳ ಸಿಇಒಗಳು ಭಾಗವಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಇಒಗಳು, ಕೇಂದ್ರ ಸರ್ಕಾರದ ನೀತಿಯನ್ನು ಶ್ಲಾಘಿಸಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 11: ಇಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಕಂಪನಿಗಳ ಸಿಇಒಗಳು ಭಾಗವಹಿಸಿದ್ದಾರೆ. ಉದ್ಘಾಟನೆಗೆ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ವಿವಿಧ ಸಿಇಒಗಳು, ಕೇಂದ್ರ ಸರ್ಕಾರದ ನೀತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯನ್ನು ಶ್ಲಾಘಿಸಿದ್ದಾರೆ. ಮೈಕ್ರೋನ್, ಸೆಮಿ, ಎನ್​ಎಕ್ಸ್​ಪಿ, ಜೇಕಬ್ಸ್, ಐಎಂಇಸಿ, ಟವರ್ ಇತ್ಯಾದಿ ಕಂಪನಿಗಳ ಸಿಇಒಗಳು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ದಶಕದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಮುಂಚೂಣಿಗೆ ಬರಬಹುದು ಎಂದು ಶ್ಲಾಘಿಸಿದ್ದಾರೆ.

Follow Us
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More