ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ ನೀಡಿದ ಕಿಡಿಗೇಡಿಗಳು; ಎಲ್ಲಿ ಹೋಯ್ತು ಪೊಲೀಸರ ಭಯ?

Updated on: Apr 01, 2026 | 4:03 PM

ಮಧ್ಯಪ್ರದೇಶದ ಸೆಂಧ್ವಾ ಜಾತ್ರೆಯಲ್ಲಿ ಯುವತಿಯರಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಕಿಡಿಗೇಡಿಗಳು ಸಾರ್ವಜನಿಕವಾಗಿ ಯುವತಿಯರನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ನೆಟ್ಟಿಗರು ಮಧ್ಯಪ್ರದೇಶ ಪೊಲೀಸರಿಗೆ ದೂರು ನೀಡಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ವಿಡಿಯೋ ಆಧರಿಸಿ ತನಿಖೆ ಆರಂಭಿಸಿದ್ದು, ಮಹಿಳಾ ಸುರಕ್ಷತೆಗಾಗಿ ಜಾತ್ರಾ ಸ್ಥಳಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಂಧ್ವಾ, ಏ.1: ಮಧ್ಯಪ್ರದೇಶದ ಸೆಂಧ್ವಾ ಜಿಲ್ಲೆಯ ಜಾತ್ರೆಯೊಂದರಲ್ಲಿ ಕೆಲವು ಕಿಡಿಗೇಡಿಗಳು ಯುವತಿಯರಿಗೆ ಬಹಿರಂಗವಾಗಿ ಕಿರುಕುಳ ನೀಡುತ್ತಿರುವ ಭಯಾನಕ ಘಟನೆ ನಡೆದಿದೆ. ಯಾವುದೇ ಭಯವಿಲ್ಲದೆ ಸಾರ್ವಜನಿಕವಾಗಿ ಯುವತಿಯರನ್ನು ಹಿಂಬಾಲಿಸುವುದು, ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸುವುದು ಮತ್ತು ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಘಟನೆಯ ವೀಡಿಯೋ ಎಕ್ಸ್ (X) ನಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಮಧ್ಯಪ್ರದೇಶ ಪೊಲೀಸರನ್ನು (@MPPoliceDeptt) ಟ್ಯಾಗ್ ಮಾಡಿ ಈ “ಛಪ್ರಿ” (Chapris) ಕಿಡಿಗೇಡಿಗಳಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ, ಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವರದಿಗಳ ಪ್ರಕಾರ, ಸ್ಥಳೀಯ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ವೀಡಿಯೋ ಆಧರಿಸಿ ಕಿಡಿಗೇಡಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮಹಿಳಾ ಸುರಕ್ಷತೆಯ ದೃಷ್ಟಿಯಿಂದ ಜಾತ್ರಾ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More