ರಾಘವೇಂದ್ರ ಸ್ಟೋರ್ಸ್ ಬಹಳ ಕಷ್ಟದ ಸಿನಿಮಾ: ಹೀಗ್ಯಾಕಂದರು ದತ್ತಣ್ಣ?

Raghavendra Stores: ರಾಘವೇಂದ್ರ ಸ್ಟೋರ್ಸ್ ಸಿನಿಮಾ ಯಶಸ್ಸನ್ನು ಚಿತ್ರತಂಡ ಸಂಭ್ರಮಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿರುವ ಹಿರಿಯ ನಟ ದತ್ತಣ್ಣ, ರಾಘವೇಂದ್ರ ಸ್ಟೋರ್ಸ್ ಬಹಳ ಕಷ್ಟದ ಸಿನಿಮಾ ಎಂದಿದ್ದಾರೆ.

ಜಗ್ಗೇಶ್ (Jaggesh) ಪ್ರಧಾನ ಪಾತ್ರದಲ್ಲಿ ನಟಿಸಿರುವ ರಾಘವೇಂದ್ರ ಸ್ಟೋರ್ಸ್ (Raghavenra Stores) ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಸಿನಿಮಾದ ಯಶಸ್ಸು ಸಂಭ್ರಮಿಸಲು ಚಿತ್ರತಂಡ ನಿನ್ನೆ ಸಕ್ಸಸ್ ಮಿಟ್ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಹಲವು ನಟರು ಭಾಗವಹಿಸಿದ್ದರು. ಜಗ್ಗೇಶ್​ರ ತಂದೆ ಪಾತ್ರದಲ್ಲಿ ನಟಿಸಿರುವ ದತ್ತಣ್ಣ (Dattanna), ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಗ್ಗೆ ಮಾತನಾಡುತ್ತಾ, ಇದು ಬಹಳ ಕಷ್ಟದ ಸಿನಿಮಾ ಎಂದು ವಿಶ್ಲೇಷಿಸಿದರು. ಜೊತೆಗೆ ಜಗ್ಗೇಶ್ ನಟನೆ ಬಗ್ಗೆ ತಾವು ಗಮನಿಸಿದ ಅಂಶಗಳನ್ನು ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 pm, Thu, 4 May 23

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us