AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಮದನ್​ ಕುಮಾರ್​
|

Updated on:May 29, 2026 | 10:58 PM

Share

ಮೂಲಗಳ ಪ್ರಕಾರ, ಸಂಜಯ್ ಮಿಶ್ರಾ ಅವರು ಅಂದಾಜು 150 ಕೋಟಿ ರೂಪಾಯಿ ಒಡೆಯ. ಆದರೂ ಕೂಡ ಅವರು ಹಳ್ಳಿ ಹೈದನಂತೆ ಸುಡು ಬಿಸಿಲಿನಲ್ಲಿ ನಿಂತು ಕೆಲಸ ಮಡುತ್ತಿರುವ ವಿಡಿಯೋ ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಲಗಳ ಪ್ರಕಾರ, ಸಂಜಯ್ ಮಿಶ್ರಾ ಅವರು ಅಂದಾಜು 150 ಕೋಟಿ ರೂಪಾಯಿ ಒಡೆಯ. ಆದರೂ ಕೂಡ ಅವರು ಹಳ್ಳಿ ಹೈದನಂತೆ ಸುಡು ಬಿಸಿಲಿನಲ್ಲಿ ನಿಂತು ಕೆಲಸ ಮಾಡುತ್ತಿರುವ ವಿಡಿಯೋ (Sanjay Mishra Viral Video) ಎಲ್ಲರ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 29, 2026 10:57 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More