ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

ಶಿವರಾಂ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದ್ದು ಯಾಕೆ? ಸದ್ಯ ಅವರ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ವೈದ್ಯರು ವಿವರಿಸಿದ್ದಾರೆ.

ಕನ್ನಡದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಬೆಂಗಳೂರಿನ ಬ್ಯಾಂಕ್​ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. 84 ವರ್ಷದ ಶಿವರಾಂ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗಿದ್ದು ಯಾಕೆ? ಸದ್ಯ ಅವರ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ವೈದ್ಯರು ವಿವರಿಸಿದ್ದಾರೆ. ‘ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ಟೆರೆಸ್​ನಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಲ್ಲಿಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು. ಒಂದೂವರೆ ಗಂಟೆ ಬಳಿಕ ಅದು ತಿಳಿದುಬಂದಿದೆ. ಅವರ ಮಗ ಮತ್ತು ಮೊಮ್ಮಗಳು ಆಸ್ಪತ್ರೆಗೆ ಕರೆದುಕೊಂಡು ಬಂದರು. ಎಂಆರ್​ಐ ಸ್ಕ್ಯಾನ್​ ಮಾಡಿದಾಗ ತಲೆ ಒಳಗೆ ಪೆಟ್ಟು ಬಿದ್ದಿರುವುದು ತಿಳಿಯಿತು’ ಎಂದು ಡಾ. ಮೋಹನ್​ ಹೇಳಿದ್ದಾರೆ.

ಇದನ್ನೂ ಓದಿ:

S.Shivaram: ನಟ ಶಿವರಾಂ ಚೇತರಿಸಿಕೊಳ್ಳುವಂತೆ ದೇವರಲ್ಲಿ ಮೊರೆಯಿಟ್ಟ ಚಿತ್ರರಂಗ; ಆಸ್ಪತ್ರೆಗೆ ಹಿರಿಯ ಕಲಾವಿದರ ಭೇಟಿ

ಅಪ್ಪು ಇಲ್ಲದೇ ತಿಂಗಳು ಕಳೆದರೂ ನಿಂತಿಲ್ಲ ಕಣ್ಣೀರು; ಪುನೀತ್​ ಸಮಾಧಿ ಎದುರು ಬಿಕ್ಕಿ ಬಿಕ್ಕಿ ಅತ್ತ ಮಹಿಳೆ

Click on your DTH Provider to Add TV9 Kannada