ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ನಿಧನ; ಗಣ್ಯರ, ಅಭಿಮಾನಿಗಳ ಸಂತಾಪ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ನೂರಾರು ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರ ಮನಗೆದ್ದ ‘ಅಭಿನಯ ಶಾರದೆ’ ಜಯಂತಿ (Abhinaya Sharade Jayanthi) ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಜು.26) ಕೊನೆಯುಸಿರೆಳೆದರು. ಕನ್ನಡ ಮಾತ್ರವಲ್ಲದೆ ಹಿಂದಿ, ಮಲಯಾಳಂ, ತೆಲುಗು ಮುಂತಾದ ಭಾಷೆಗಳಲ್ಲೂ ಜಯಂತಿ (Jayanthi) ನಟಿಸಿದ್ದರು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ ಖ್ಯಾತಿ ಅವರದ್ದು.

ಜಯಂತಿ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು’ ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

Jayanthi Death: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ

Click on your DTH Provider to Add TV9 Kannada