ನಿಖಿಲ್ ಕುಮಾರಸ್ವಾಮಿ ಪ್ರಚಾರಕ್ಕೆ ಅಗಮಿಸಿದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ
ಯಡಿಯೂರಪ್ಪನವರಿಗೂ ಈಗ ಇಳಿಪ್ರಾಯ. ಮಗ ಪಕ್ಷದ ರಾಜ್ಯಾಧ್ಯಕ್ಷನಾದ ಬಳಿಕ ಅವರು ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ನಿಖಿಲ್ ಕುಮಾರಸ್ವಾಮಿ ನಿಜಕ್ಕೂ ಅದೃಷ್ಟವಂತ. 92 ರ ದೇವೇಗೌಡ ಮತ್ತು 82-ವರ್ಷ ವಯಸ್ಸಿನ ಯಡಿಯೂರಪ್ಪ ಇಬ್ಬರೂ ಅವರ ಪರವಾಗಿ ಪ್ರಚಾರ ಮಾಡೋದು ಅಂದ್ರೆ ಸುಮ್ನೆನಾ?
ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ನಿನ್ನೆಯಿಂದ ಬಿಜೆಪಿ ನಾಯಕರು ಆಗಮಿಸುತ್ತಿದ್ದಾರೆ. ಮಂಗಳವಾರ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಂದಿದ್ದರು. ಇವತ್ತು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ಸೋಗಾಲ ಗ್ರಾಮದಲ್ಲಿ ಪ್ರಚಾರ ಮಾಡಿದರು. ಇಬ್ಬರು ಮಾಜಿ ಮುಖ್ಯಮಂತ್ರಿಗಳು ತೆರೆದ ವಾಹನದಲ್ಲಿ ಸಾಗುತ್ತಾ ಜನರ ಮತ ಯಾಚಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕುಟುಂಬದ ಕೆಲ ಸದಸ್ಯರೊಂದಿಗೆ ಹಾಸನಾಂಬೆಯ ದರ್ಶನ ಮಾಡಿಕೊಂಡ ಬಿಎಸ್ ಯಡಿಯೂರಪ್ಪ
Published on: Nov 06, 2024 07:12 PM
Latest Videos