ಬಳ್ಳಾರಿ ಜಿಲ್ಲಾ ಬಿಜೆಪಿ ಸಂಘಟನೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮಾಜಿ ಸಚಿವ ಶ್ರೀರಾಮುಲು
ಪಕ್ಷ ಸಂಘಟನೆ ಕಡೆ ಶ್ರೀರಾಮುಲು ಹೆಚ್ಚು ಕಾಳಜಿ ತೋರುತ್ತಿರುವುದು ಮಾತುಗಳಿಂದ ಸ್ಪಷ್ಟವಾಗುತ್ತದೆ. ಬಳ್ಳಾರಿ ಲೋಕಸಭಾ ಚುನಾವಣೆ ಮತ್ತು ಕಂಪ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಸೋಲುಂಟಾದರೂ ಪಕ್ಷದ ಕಾರ್ಯಕರ್ತರು ದೃತಿಗೆಡದೆ ತಮ್ಮ ಪಕ್ಷನಿಷ್ಠೆಯನ್ನು ಅಚಲವಾಗಿಟ್ಟುಕೊಂಡಿರುವುದು ಅಭಿನಂದನೀಯ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳುತ್ತಾರೆ.
ಬಳ್ಳಾರಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ಶ್ರೀರಾಮುಲು ಬಿಜೆಪಿ ಪಕ್ಷವನ್ನು ತ್ಯಜಿಸುವುದಿಲ್ಲ ಎಂಬ ಸಂಗತಿಯನ್ನು ಸ್ಪಷ್ಟಪಡಿಸಿದ್ದಾರೆ. ಆದರೆ ಕೆಲ ಕಾಂಗ್ರೆಸ್ ನಾಯಕರು ಅವರನ್ನು ಸಂಪರ್ಕಿಸುವುದನ್ನು ಬಿಟ್ಟಿಲ್ಲ. ಇದೇ ಹಿನ್ನೆಲೆಯಲ್ಲಿ ಶ್ರೀರಾಮುಲು ಬಳ್ಳಾರಿ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ನಿಲುವನ್ನು ಸ್ಷಷ್ಟಪಡಿಸಿದ್ದಾರೆ. ಕಂಪ್ಲಿ ವಿಧಾನಸಭಾ ಕ್ಷೇತ್ರದ ಕುರಗೋಡು ಮಂಡಲಗಳ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವವರ ಸತ್ಕಾರ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅವರ ಭಾಗಿಯಾಗುವಿಕೆ ಕಾಂಗ್ರೆಸ್ ಪಕ್ಷ ಸೇರುವ ಊಹಾಪೋಹಗಳಿಗೆ ತೆರೆ ಎಳೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಇನ್ನು ಸುಮ್ಮನಿದ್ದರೆ ನಡೆಯಲ್ಲ, ತುಳಿಯುವ ಪ್ರಯತ್ನ ಮಾಡಿದರೆ ಬೀದಿಗಿಳಿದು ಹೋರಾಟ: ಬಿ ಶ್ರೀರಾಮುಲು

