AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಮದನ್​ ಕುಮಾರ್​
|

Updated on: Jun 08, 2026 | 8:30 PM

Share

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಚಿತ್ರದ ಕಥೆ. ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು ಮಾತನಾಡಿದರು. ‘ಚುನಾವಣೆಯಲ್ಲಿ ನಿಲ್ಲದೆಯೇ ಯಾವ ರೀತಿ ಸಿಎಂ ಆಗಿದ್ದಾರೆ ಎಂಬುದು ಈ ಕಥೆಯಲ್ಲಿನ ಸಸ್ಪೆನ್ಸ್. ಗೌರಿಶಂಕರ್ ಅವರು ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ತಿಂಗಳಲ್ಲಿ ಸೆನ್ಸಾರ್ ಪ್ರಕ್ರಿಯೆ ಮುಗಿದರೆ ನಂತರ ರಿಲೀಸ್ ದಿನಾಂಕ ತಿಳಿಸುತ್ತೇವೆ. ಮಳೆಗಾಲದ ಬಳಿಕ ರಿಲೀಸ್ ಮಾಡಬೇಕು ಎಂಬ ಆಸೆ ಇದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More