Bengaluru: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ
ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನುಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ನೇಮಿಸಲಾಗಿದ್ದು, ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರು, ಡಿಸೆಂಬರ್ 11: ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ ಸುಧಾರಣೆ ಮುಖ್ಯ. ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆ ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
