AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗ ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ

ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗ ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ

ಕಿರಣ ಹೆಚ್​. ವಿ.
| Edited By: |

Updated on:Oct 13, 2026 | 12:35 PM

Share

ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕೆಎಸ್ಆರ್​ಪಿ ಎಡಿಜಿಪಿ ಎಸ್. ರವಿ ಅವರು ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್​ಎಸ್) ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ ಎಂದು ಡಿಜಿ ಐಜಿಪಿ ಸಲೀಂ ದೃಢಪಡಿಸಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪವೇ ರಾಜೀನಾಮೆಗೆ ಕಾರಣ ಎಂಬ ಚರ್ಚೆ ಪೊಲೀಸ್ ವಲಯದಲ್ಲಿ ನಡೆಯುತ್ತಿದೆ.

ಬೆಂಗಳೂರು, ಅಕ್ಟೋಬರ್​​ 13: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್​ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ಅವರು ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್​ಎಸ್) ಅರ್ಜಿ ಸಲ್ಲಿಸಿದ್ದಾರೆ. ಡಿಜಿ ಐಜಿಪಿ ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ಎಸ್. ರವಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ನಿನ್ನೆ ಸಂಜೆ ಅಷ್ಟೇ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಡಿಜಿ ಕಚೇರಿಯಿಂದ ಗೃಹ ಇಲಾಖೆಗೆ ಪತ್ರ ರವಾನೆಯಾಗುವ ಸಾಧ್ಯತೆಯಿದೆ. ಆದರೆ, ಪೊಲೀಸ್ ವಲಯದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಲ ಮೂಲಗಳ ಪ್ರಕಾರ, ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪ ರಾಜೀನಾಮೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 13, 2026 12:34 PM

Follow Us
ಕಿರಣ ಹೆಚ್​. ವಿ.
ಕಿರಣ ಹೆಚ್​. ವಿ.

ಪತ್ರಿಕೋದ್ಯಮದಲ್ಲಿ ದಶಕಗಳ ಅನುಭವ. ಪ್ರಸ್ತುತ ‘ಟಿವಿ9’ನಲ್ಲಿ ಮುಖ್ಯ ಅಪರಾಧ ವರದಿಗಾರ.

Read More