ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗ ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ
ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕೆಎಸ್ಆರ್ಪಿ ಎಡಿಜಿಪಿ ಎಸ್. ರವಿ ಅವರು ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ ಎಂದು ಡಿಜಿ ಐಜಿಪಿ ಸಲೀಂ ದೃಢಪಡಿಸಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪವೇ ರಾಜೀನಾಮೆಗೆ ಕಾರಣ ಎಂಬ ಚರ್ಚೆ ಪೊಲೀಸ್ ವಲಯದಲ್ಲಿ ನಡೆಯುತ್ತಿದೆ.
ಬೆಂಗಳೂರು, ಅಕ್ಟೋಬರ್ 13: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ಅವರು ನಿವೃತ್ತಿಗೆ ಆರು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್ಎಸ್) ಅರ್ಜಿ ಸಲ್ಲಿಸಿದ್ದಾರೆ. ಡಿಜಿ ಐಜಿಪಿ ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ಎಸ್. ರವಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ನಿನ್ನೆ ಸಂಜೆ ಅಷ್ಟೇ ವಿಆರ್‌ಎಸ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಡಿಜಿ ಕಚೇರಿಯಿಂದ ಗೃಹ ಇಲಾಖೆಗೆ ಪತ್ರ ರವಾನೆಯಾಗುವ ಸಾಧ್ಯತೆಯಿದೆ. ಆದರೆ, ಪೊಲೀಸ್ ವಲಯದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಕೆಲ ಮೂಲಗಳ ಪ್ರಕಾರ, ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪ ರಾಜೀನಾಮೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 13, 2026 12:34 PM
Loading...
Unable to load recommendations.
Follow Us
