Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಸನಾತನ ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರಕ್ಕೆ ಬಹಳ ಮಹತ್ವವಾದ ಸ್ತಾನವಿದೆ. ಋಷಿಮುನಿಗಳು, ಪಂಡಿತರು ಗ್ರಹಗಳ ಸಂಚಾರ, ರಾಶಿಗಳ ಮುಖಾಂತರ ತಮ್ಮ ದೈನಂದಿನ ಜೀವನವನ್ನು ನಡೆಸುತ್ತಿದ್ದರು. ರಾಶಿಗಳ ಮುಖಾಂತರ ಭವಿಷ್ಯವನ್ನು ತಿಳಿಯುತ್ತಿದ್ದರು. ನಮ್ಮ ಜೀವನದಲ್ಲಿ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ದ್ವಾದಶ ಜ್ಯೋತಿಷ್ಯ ರಾಶಿಗಳು ಪ್ರತಿಯೊಂದೂ ಜೀವಿಯ ಮೇಲೆ ಇವು ಪ್ರಭಾವ ಬೀರುತ್ತವೆ. ವಿಶೇಷವಾಗಿ ಮನುಷ್ಯನ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರುತ್ತದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್ 10) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:36 ಗಂಟೆ, ರಾಹು ಕಾಲ ಮಧ್ಯಾಹ್ನ 03:33 ರಿಂದ ಸಂಜೆ 05:05, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ