Nithya Bhavishya: ಭಾದ್ರಪದ ಮಾಸದ ನಾಲ್ಕನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ಭಾದ್ರಪದ ಮಾಸ ಗಣೇಶನ ಆರಾಧನೆಗೆ ಬಹಳ ಶ್ರೇಷ್ಠವಾದ ತಿಂಗಳು. ಸೆಪ್ಟೆಂಬರ್ 24 ಮಂಗಳವಾರ ಗಣೇಶನ ಆರಾಧನೆ ಸೂಕ್ತವಾದ ದಿನವಾಗಿದೆ. ಗಣಪತಿ ಸರ್ವರ ವಿಘ್ನಗಳನ್ನು ನಿವಾರಣೆ ಮಾಡುತ್ತಾನೆ. ಈ ಶುಭದಿನದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಮಂಗಳವಾರ ಇಂದು (ಸೆಪ್ಟೆಂಬರ್ 24) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯ ನಕ್ಷತ್ರ: ಮೃಗಶಿರಾ, ಯೋಗ: ವ್ಯತಿಪಾತ್, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:25 ರಿಂದ ಸಂಜೆ 04:56, ಯಮಘಂಡ ಕಾಲ ಬೆಳಿಗ್ಗೆ 09:24ರಿಂದ 10:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:24 ರಿಂದ 01:55 ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 24, 2024 06:32 AM
ವಿಶ್ವದ ಮೊದಲ 'ಟಿಲ್ಟೆಡ್ ಎಲ್ಇಡಿ ತಾರಾಲಯ' ಉದ್ಘಾಟಿಸಿದ ಪ್ರಧಾನಿ
ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್
ಹೆಚ್ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್ಡಿ ಕುಮಾರಸ್ವಾಮಿ
