Nithya Bhavishya: ಭಾದ್ರಪದ ಮಾಸದ ನಾಲ್ಕನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ

|

Updated on: Sep 24, 2024 | 6:34 AM

ಭಾದ್ರಪದ ಮಾಸ ಗಣೇಶನ ಆರಾಧನೆಗೆ ಬಹಳ ಶ್ರೇಷ್ಠವಾದ ತಿಂಗಳು. ಸೆಪ್ಟೆಂಬರ್​ 24 ಮಂಗಳವಾರ ಗಣೇಶನ ಆರಾಧನೆ ಸೂಕ್ತವಾದ ದಿನವಾಗಿದೆ. ಗಣಪತಿ ಸರ್ವರ ವಿಘ್ನಗಳನ್ನು ನಿವಾರಣೆ ಮಾಡುತ್ತಾನೆ. ಈ ಶುಭದಿನದ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಮೂರನೇ ಮಂಗಳವಾರ ಇಂದು (ಸೆಪ್ಟೆಂಬರ್​ 24) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯ ನಕ್ಷತ್ರ: ಮೃಗಶಿರಾ, ಯೋಗ: ವ್ಯತಿಪಾತ್, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:25 ರಿಂದ ಸಂಜೆ 04:56, ಯಮಘಂಡ ಕಾಲ ಬೆಳಿಗ್ಗೆ 09:24ರಿಂದ 10:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:24 ರಿಂದ 01:55 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:32 am, Tue, 24 September 24

Follow us on