Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ

ಆಯೇಷಾ ಬಾನು

Updated on: Sep 29, 2024 | 6:39 AM

ಸೆ.28ರ ಭಾನುವಾರವಾದ ಇಂದು 12 ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮನುಷ್ಯನ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಭಾದ್ರಪದ ಮಾಸದ ಕೊನೇ ಭಾನುವಾರವಾದ ಇಂದು (ಸೆಪ್ಟೆಂಬರ್​ 29) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 22 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:52 ರಿಂದ 06:22, ಯಮಘಂಡ ಕಾಲ ಮಧ್ಯಾಹ್ನ 12:23ರಿಂದ 01:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:23 ರಿಂದ 04:52 ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.