ಹೈದರಾಬಾದ್‌ ದೇವಸ್ಥಾನದ ಗೋಡೆಗೆ ಡಿಕ್ಕಿಯಾಗಿ ಟ್ಯಾಂಕರ್ ಪಲ್ಟಿ; ಬೆಚ್ಚಿಬೀಳಿಸುವ ವಿಡಿಯೋ ಇಲ್ಲಿದೆ

Updated on: Sep 16, 2025 | 10:32 PM

ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದಲ್ಲಿ ಹೈದರಾಬಾದ್‌ನ ಉಪ್ಪಾಲ್​​ನ ಎನ್‌ಜಿಆರ್‌ಐ ಬಳಿಯಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿರುವ ದೃಶ್ಯ ಕಂಡುಬಂದಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರವಾದ ಆತಂಕ ಸೃಷ್ಟಿಸಿದೆ.

ಹೈದರಾಬಾದ್, ಸೆಪ್ಟೆಂಬರ್ 16: ಹೈದರಾಬಾದ್‌ನ ಉಪ್ಪಲ್ ಪ್ರದೇಶದ ಎನ್‌ಜಿಆರ್‌ಐ ಬಳಿಯ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದಲ್ಲಿ (Accident) ಹೈದರಾಬಾದ್‌ನ ಉಪ್ಪಾಲ್​​ನ ಎನ್‌ಜಿಆರ್‌ಐ ಬಳಿಯಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಸೆಪ್ಟಿಕ್ ಟ್ಯಾಂಕರ್ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿರುವ ದೃಶ್ಯ ಕಂಡುಬಂದಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರವಾದ ಆತಂಕ ಸೃಷ್ಟಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More